ಯತೀಂದ್ರ ಸಿದ್ದರಾಮಯ್ಯ ಜೊತೆಗೆ ಐಎಸ್ ಅಧಿಕಾರಿ ಭೂ ಬಾಲನ್ ವಿರುದ್ಧವೂ ಹಲವು ದಾಖಲೆಗಳ ಸಮೇತ ಎನ್.ಆರ್ ರಮೇಶ್ ದೂರು ಸಲ್ಲಿಸಿದ್ದಾರೆ. ಕಳೆದ ವರ್ಷ ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದ್ದು, ಅರ್ಹತೆ ಇಲ್ಲದ ಕಂಪನಿಗೆ ಟೆಂಡರ್ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.ಇದರಿಂದ ಸಚಿವ ಯತೀಂದ್ರ ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಬೇಕೆಂದು ರಮೇಶ್ ಆಗ್ರಹಿಸಿದ್ದಾರೆ.
ಈ ಟೆಂಡರ್ ಪ್ರಕ್ರಿಯೆ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾಗಿದೆ. ಆಗ ಸಿದ್ದರಾಮಯ್ಯ ತಮ್ಮ ಬಳಿಯೇ DPAR ಇಲಾಖೆಯನ್ನು ಉಳಿಸಿಕೊಂಡಿದ್ದರು. ಈ ವೇಳೆ ಯತೀಂದ್ರ ಸಿದ್ದರಾಮಯ್ಯ ಅಣತಿ ಮೇರೆಗೆ ಟೆಂಡರ್ ನೀಡಿದ ಆರೋಪ ಕೇಳಿಬಂದಿದೆ. ಅರ್ಹತೆಯೇ ಇಲ್ಲದ ಹೈದರಾಬಾದ್ ಮೂಲದ ಕಂಪನಿಗೆ ಟೆಂಡರ್ ನೀಡಲಾಗಿದೆ. ಇ-ಆಡಳಿತ ವಿಭಾಗದ ಸಿಇಒ ಅಧಿಕಾರಿ ಭೂಬಾಲನ್ ಸೇರಿದಂತೆ ಮೂವರು ಅಧಿಕಾರಿಗಳ ವಿರುದ್ಧವೂ ದೂರು ನೀಡಲಾಗಿದೆ.

