2024ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿರುವ ಕಾಂಗ್ರೆಸ್ ಸೋತ 84 ಕ್ಷೇತ್ರಗಳ ಮೇಲೆ ಚಿತ್ತ ಹರಿಸಿದೆ. ಮುಂದಿನ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲೂ ಅಧಿಪತ್ಯ ಸಾಧಿಸಬೇಕು ಎಂದು ಪಣ ತೊಟ್ಟಿದೆ ಇದರಿಂದ ಈಗಿನಿಂದಲೇ ತಯಾರಿಗೆ ಸಿದ್ಧವಾಗಿದ್ದು ನಾಳೆಯಿಂದ ರಾಜ್ಯದಲ್ಲಿ ಭಾರತ್ ಜೋಡೋ-2 ಅಭಿಯಾನವನ್ನು ಆರಂಭಿಸುತ್ತಿದೆ. ಈ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ. 

ಭಾರತ್ ಜೋಡೋ-2 ಅಭಿಯಾನಕ್ಕೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಚಾಲನೆ ದೊರೆಯಲಿದೆ. ಯಡಿಯೂರಪ್ಪನವ ಭದ್ರಕೋಟೆ ಅಂತಾನೇ ಕರೆಸಿಕೊಳ್ಳುವ ಹಾಗೂ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಕ್ಷೇತ್ರದಿಂದ ಯಾತ್ರೆ ಆರಂಭ ಮಾಡುತ್ತಿರುವುದು ಇಲ್ಲಿ ಗಮನಾರ್ಹವಾಗಿದೆ. ಬೆಳಗ್ಗೆ 10 ಗಂಟೆಗೆ ಕಿಟ್ಟದಂಡಿ ಗ್ರಾಮದಿಂದ ಪಾದಯಾತ್ರೆ ಆರಂಭವಾಗಲಿದ್ದು, ಕೋಟೆ, ಹೊಸನಗರ, ಮತ್ತಿಕೋಟೆ, ಹೊಸನಗರ ಕ್ರಾಸ್ ಹಾಗೂ ನೆಲವೊಡ್ಲು ಗ್ರಾಮಗಳ ಮೂಲಕ ಸಾಗಲಿದೆ. ಬಳಿಕ ಶಿಕಾರಿಪುರದ ಎಪಿಎಂಸಿ ಯಾರ್ಡ್ನಲ್ಲಿ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ. ಹೀಗೆ ಆರಂಭವಾಗುವ ಭಾರತ್ ಜೋಡೋ -2 ಯಾತ್ರೆ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದ್ದ 84 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಯಲಿದೆ. 2022ರ ಸೆಪ್ಟೆಂಬರ್ 30ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿತ್ತು. ಇದರ ವಾರ್ಷಿಕೋತ್ಸವದ ಅಂಗವಾಗಿ ನಾಳೆಯಿಂದ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಸಂಜೆ ಕ್ಷೇತ್ರದಲ್ಲಿ ಬೃಹತ್ ಸಮಾವೇಶದೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದರು.

ವಿವಿಧ ಜಿಲ್ಲೆಗಳ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಬರ ಪರಿಸ್ಥಿತಿ ಸೇರಿದಂತೆ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಅವರೊಂದಿಗೆ ಚರ್ಚಿಸಲಾಗುವುದು. ಅಲ್ಲದೆ, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧದ ಆರೋಪಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಹರಿಪ್ರಸಾದ್ ತಿಳಿಸಿದರು.

ಇನ್ನು ಇದೇ ವೇಳೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸೋಲಿಸುವುದೇ ತಮ್ಮ ಗುರಿ ಎಂದರು. ವಿಜಯೇಂದ್ರ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಿದ್ದರು ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು