ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಸೇರಿದಂತೆ ಸಚಿವರಾದ ಖಾದರ್, ಪ್ರಿಯಾಂಕ್ ಖರ್ಗೆ ಸೇರದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಪರಮೇಶ್ವರ್ ಅವರಿಗೆ ಹೃದಯದಲ್ಲಿ ತೊಂದರೆ ಕಾಣಿಸಿಕೊಂಡಿದೆ ಎಂದು ಗೊತ್ತಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದಾರೆ.

ಸದ್ಯ ವೈದ್ಯರ ತಂಡ ಪರೇಮೇಶ್ವರ್ ಅವರ ಆರೋಗ್ಯ ಸ್ಥಿತಿಯನ್ನು ತೀವ್ರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ. ಬ್ಯಾಡ್ಮಿಂಟನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ DCM ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾದಾಗ, ಜೊತೆಯಲ್ಲಿದ್ದ MLC ಗೋವಿಂದರಾಜು ಅವರು ಸಮಯಪ್ರಜ್ಞೆ ಮೆರೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.