ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಮಾಜಿ ಶಾಸಕರನ್ನೊಳಗೊಂಡ ನಿಯೋಗ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿ, ದೂರು ನೀಡಿದೆ.ಶಾಸಕ ಪ್ರದೀಪ್ ಈಶ್ವರ್ ಕಾರ್ಯವೈಖರಿ, ಪಕ್ಷ ಸಂಘಟನೆ ಹಾಗೂ ಸ್ಥಳೀಯ ಚುನಾವಣೆಗಳ ಕುರಿತು ಹಲವು ಅಹವಾಲುಗಳನ್ನೂ ಕೂಡಾ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಶಾಸಕ ಪ್ರದೀಪ್ ಈಶ್ವರ್ ಕ್ಷೇತ್ರಕ್ಕೆ ಸರಿಯಾಗಿ ಬರುತ್ತಿಲ್ಲ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಕರೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಗಳ ಸುರಿಮಳೆ ಸುರಿಸಿದ್ದಾರೆ.ನಿಷ್ಠಾವಂತ ಕಾರ್ಯಕರ್ತರಿಗೆ ನಾಮನಿರ್ದೇಶನ ಸ್ಥಾನಗಳನ್ನು ನೀಡುತ್ತಿಲ್ಲ. ಹಾಗೇ ಸ್ಥಳೀಯ ಚುನಾವಣೆಗಳಲ್ಲಿ ಶಾಸಕರು ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಇದರಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗುವ ಆತಂಕ ಇದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ವಿಚಾರಗಳನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತರಲಾಗಿದ್ದು, ಮುಂದಿನ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ಗೆ ಟಿಕೆಟ್ ನೀಡಬಾರದು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ಇಲ್ಲಿ ಪ್ರದೀಪ್ ಈಶ್ವರ್ ಹೇಳಿರುವುದು ಇನ್ನೂ 25 ವರ್ಷಗಳಾದ ತಾವೂ ಮುಖ್ಯಮಂತ್ರಿ ಆಗುವ ಆಸೆ ಇದೆ ಎಂದು. ಆದರೆ ಇದರಲ್ಲಿ ತಪ್ಪೇನಿದೆ ಎನ್ನುವ ಮಾತುಗಳು ಕೂಡಾ ಮತ್ತೊಂದು ಕಡೆ ಕೇಳಿ ಬರುತ್ತಿದೆ. ಅಷ್ಟಕ್ಕೂ ಪ್ರದೀಶ್ ಈಶ್ವರ್ ಅವರೇನೋ 2028ಕ್ಕೇ ಮುಖ್ಯಮಂತ್ರಿ ಆಗೋ ಆಸೆಯನ್ನು ವ್ಯಕ್ತ ಪಡಿಸಿಲ್ಲವಲ್ಲ ಎಂದು ಪ್ರದೀಪ್ ಈಶ್ವರ್ ಬೆಂಬಲಿಗರು ಕೇಳುತ್ತಿದ್ದಾರೆ.


