ಕರ್ತವ್ಯ ನಿರತ ಮಹಿಳಾ ಪಿಎಸ್ ಐ ಸವಿತಾ ಪಾಟೀಲ್ ಗೆ ಕಪಾಳ ಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಸುರೇಶ್ ಗೌಡ ಪುತ್ರಿ ಕ್ಷಮೆ ಯಾಚಿಸಿದರೆ ಅವರ ನಿರಿಕ್ಷಣಾ ಜಾಮೀನು ಅರ್ಜಿಯನ್ನು ಪರಿಶೀಲನೆ ನಡೆಸಬಹುದೆಂದು ಹೈಕೋರ್ಟ್ ಸ್ಪಷ್ಟ ಪಡಿಸಿತ್ತು.ಈ ಹಿನ್ನೆಲೆಯಲ್ಲಿ ಐಶ್ವರ್ಯ ಕ್ಷಮೆ ಕೋರಿದ್ದಾರೆ.
ಆಗಸ್ಟ್ 12ರಂದು ಭೀಮನ ಅಮಾವಾಸ್ಯೆ ಪ್ರಯುಕ್ತ ನಾನು ಮತ್ತು ನನ್ನ ಇಬ್ಬರು ಮಕ್ಕಳು ಪಾಂಡವಪುರದ ಉಕ್ಕಡಮ್ಮ ದೇವಸ್ಥಾನಕ್ಕೆ ತೆರಳಿದ್ದೆವು. ಅಂದು ದೇಗುಲದಲ್ಲಿ ಜನಸಂದಣಿ ಹೆಚ್ಚಿತ್ತು. ಇದರಿಂದ ನಾನು ನನ್ನ ಮಕ್ಕಳಿಗೆ ಅಮ್ಮ ಆಗಿದ್ದ ಕಾರಣ ದೇವರ ದರ್ಶನ ಪಡೆಯುವ ಸಂದರ್ಭದಲ್ಲಿ ನನ್ನ ಮತ್ತು ಮಹಿಳಾ ಪಿಎಸ್ಐ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ. ಈ ಘಟನೆ ನಡೆಯಬಾರದಿತ್ತು. ಈ ಘಟನೆ ಬಗ್ಗೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಈ ಘಟನೆಯಿಂದ ಕರ್ತವ್ಯದಲ್ಲಿದ್ದ ಪಿಎಸ್ಐ ಸವಿತಾ ಪಾಟೀಲ್ ಅವರಿಗೆ ನೋವಾಗಿದ್ದರೆ, ಬೇಷರತ್ ಆಗಿ ಕ್ಷಮೆ ಯಾಚಿಸುತ್ತೇನೆ ಎಂದು ವೀಡಿಯೋ ಮೂಲಕ ಐಶ್ವರ್ಯ ಕ್ಷಮೆಯಾಚಿಸಿದ್ದಾರೆ.


