ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳು ಯಾವುವು.?
-ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ 7ನೇ ಅಧಿಸೂಚನೆ ಒಪ್ಪಿಕೊಂಡಿರುವುದಿಲ್ಲ. ಬದಲಿಗೆ ವರದಿಯ ನ್ಯೂನ್ಯತೆಗಳನ್ನು ಸರಿಪಡಿಸಬೇಕು
-ESA ವ್ಯಾಪ್ತಿಯಲ್ಲಿ ಕೇವಲ ಅಧಿಸೂಚಿತ ಅರಣ್ಯ ಪ್ರದೇಶ, ಇತರೆ ಅರಣ್ಯ ಪ್ರದೇಶಗಳನ್ನು ಮಾತ್ರ ಸೇರಿಸಬೇಕು ಕೃಷಿ ಭೂಮಿ, ತೋಟ, ಜನವಸತಿ ಭೂಮಿ ಸೇರಿಸಬಾರದು
-ಬಗರ್ ಹುಕುಂ, ಅರಣ್ಯ ಹಕ್ಕು, ಡೀಮ್ಡ್ ಫಾರೆಸ್ಟ್, ಭೂ ಮಂಜೂರಾತಿ, ಮೇಲ್ಮನವಿ, ನ್ಯಾಯಾಂಗ ಪ್ರಕರಣ ಪರಿಗಣಿಸಬೇಕು, ಭೌತಿಕವಾಗಿ ಸರ್ವೇ ಮಾಡಿ ಗುರುತಿಸಬೇಕು
-ರಾಜ್ಯ ಸರ್ಕಾರಿಂದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಂದಾಯ ಅಧಿಕಾರಿಗಳು, ರೈತ ಪ್ರತಿನಿಧಿ, -
ಕೈಗಾರಿಕಾ ಉದ್ಯಮ ಪ್ರತಿನಿಧಿ, ವಿಷಯ ಪರಿಣಿತರು, ಶೈಕ್ಷಣಿಕ ತಜ್ಞರು, ವಿಜ್ಞಾನಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡುವುದು
-ಭೌತಿಕ ಸರ್ವೇ ಸೇರಿದಂತೆ ಕಸ್ತೂರಿ ರಂಗನ್ ವರದಿಯ ನ್ಯೂನ್ಯತೆ ಸರಿಪಡಿಸಲು ಒಂದು ವರ್ಷದ ಕಾಲಾವಕಾಶಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿಗೆ ನಿರ್ಧಾರ
-ಈ ಅವಧಿಯಲ್ಲಿ ರಾಜ್ಯಕ್ಕೆ ಸಂಬಂಧಿಸಿದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಬಾರದು ಮತ್ತು ರಾಜ್ಯ ಸರ್ಕಾರದ ವಿಷಯದ ಬಗ್ಗೆ ಚರ್ಚೆ ನಡೆಸಿಯೇ ಅಂತಿಮ ನಿರ್ಧಾರ ಕೈಗೊಳ್ಳಬೇಕು
ಸರ್ಕಾರದ ನಿರ್ಣಯಕ್ಕೆ ವಿಪಕ್ಷ ಬೆಂಬಲ
ಸರ್ಕಾರ ಕಸ್ತೂರಿ ರಂಗನ್ ವರದಿ ಕುರಿತು ತೆಗೆದುಕೊಂಡಿರುವ ನಿರ್ಣಯಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅಶೋಕ್ ಇದರಲ್ಲಿ ನಾವು ಯಾವುದೇ ರಾಜಕಾರಣ ಬೆರೆಸಲ್ಲ.ನಾವೆಲ್ಲರೂ ಸರ್ವಾನುಮತದಿಂದ ಒಪ್ಪಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೇ ಮೇಲಿನಿಂದ ನೋಡಿದ್ರೆ ಎಲ್ಲವೂ ಕಾಡು ಎನ್ನುವಂತೆ ಕಾಣುತ್ತೆ. ಕಾಡು ಯಾವುದು, ರೈತರ ಭೂಮಿ ಯಾವುದು ಅಂತಾ ಕಾಣಲ್ಲ. ಗ್ರಾಮ ಮಟ್ಟದಲ್ಲಿ ಸ್ಥಳೀಯವಾಗಿ ಪರೀಕ್ಷೆ ಆಗಬೇಕು. ನಮ್ಮದೂ ಸಹ ಗ್ರಾಮ ಮಟ್ಟದಲ್ಲಿ ಸರ್ವೆ ಆಗಬೇಕು ಅನ್ನೋ ಅಭಿಪ್ರಾಯ ಆಗಿದೆ ಎಂದರು.

