ಈ ಮೊದಲೇ ಅವರಿಗೆ ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಸೂಚಿಸಿದ್ದರು. ಆದರೆ ಅದನ್ನು ಲೆಕ್ಕಿಸದೇ ಅವರು ಪ್ರತಿಭಟನೆಗೆ ತೆರಳಲು ಮುಂದಾಗಿದ್ದರು. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಸಿಜೆಪಿ ಕರೆಕೊಟ್ಟಿತ್ತು. ಶುಕ್ರವಾರದಿಂದಲೇ ದೇಶದ ನಾನಾ ಭಾಗದ ಯುವಜನರು ದೆಹಲಿಗೆ ಬರುತ್ತಿದ್ದಾರೆ. ಆದರೆ ಯಾವ ರಾಜ್ಯಗಳಲ್ಲಿ ಬಿಜೆಪಿ ಆಡಳಿತಲ್ಲಿ ಇದೆಯೋ ಆ ರಾಜ್ಯಗಳಲ್ಲಿ ಹಲವರನ್ನು ಮಾರ್ಗಮಧ್ಯೆಯೇ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ದೆಹಲಿಯಲ್ಲಿಯೂ ಸುಮಾರು 30 ಸಾವಿರ ಪೊಲೀಸರು, ಸೇನಾ ತುಕಡಿಗಳನ್ನು ನಿಯೋಜಿಸಲಾಗಿದೆ., ಪ್ರತಿಭಟನೆಯನ್ನು ಹತ್ತಿಕ್ಕಲು ಮೋದಿ ಸರ್ಕಾರ ಯತ್ನಿಸುತ್ತಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿದ್ದು. ಈವರೆಗೆ ಸುಮಾರು 1,000 ಮಂದಿಯನ್ನು ದೆಹಲಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.