ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯರೆಡ್ಡಿ ಇಂದು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಸೌಮ್ಯರೆಡ್ಡಿ ಕಳೆದ ಎರಡು ವರ್ಷಗಳಿಂದ KPCC ಮಹಿಳಾ ಘಟಕದ ಅಧ್ಯಕ್ಷ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. 

2026ರ ಆಗಸ್ಟ್ 20ರಂದೇ ತಮ್ಮ ರಾಜಿನಾಮೆ ಪತ್ರವನ್ನು ಸೌಮ್ಯ ರೆಡ್ಡಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರವಾನಿಸಿದ್ದಾರೆ ಆದರೆ ಅದು ತಡವಾಗಿ ಬೆಳಕಿಗೆ ಬಂದಿದೆ. ಇದಕ್ಕೆ ಪಕ್ಷದೊಳಗಿನ ಅಸಮಾಧಾನ ಕಾರಣವಿರಬಹುದು ಎಂದು ಹೇಳಲಾಗುತ್ತಿದೆ. ಅಲ್ಲದೇ ಸಚಿವ ಸಂಪುಟದಲ್ಲಿ ಮಹಿಳೆಗೆ ಪ್ರಾತಿನಿಧ್ಯ ಸಿಕ್ಕಿಲ್ಲ.ಇದರಿಂದ ಹೈಕಮಾಂಡ್ ಗಮನ ಸೆಳೆಯಲು ಸೌಮ್ಯರೆಡ್ಡಿ ಮುಂದಾಗಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನೇ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ತಿಳಿದು ಬಂದಿದೆ.

KPCC ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡುವವರೆಗೂ ಆ ಸ್ಥಾನದಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಇನ್ನು ಮುಂದಿನ ರಾಜ್ಯ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಸಾಮಾನ್ಯ ಕಾರ್ಯಕರ್ತೆಯಾಗಿ ನನ್ನ ಜವಾಬ್ದಾರಿಗಳನ್ನು ಮುಂದುವರೆಸಿಕೊಂಡು ಹೋಗಲು ಇಚ್ಛಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.