ಸರ್ಕಾರಿ ನೌಕರರ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಆದೇಶ ಕೊಟ್ಟಿದ್ದಾರೆ. ಯಾರಾದರೂ ಶಿಫಾರಸು ಪತ್ರ ತಂದರೆ ತಾವು ಸುಮ್ಮನಿರಲ್ಲ ಎಂದು ಗುಡುಗಿದ್ದಾರೆ. ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆಗಾಗಿ ಶಿಫಾರಸು ಪತ್ರಗಳನ್ನು ಹಿಡಿದು ತಮ್ಮ ಬಳಿ ಬರಬಾರದು ಎಂದು ಶಿವಕುಮಾರ್ ಹೇಳಿದ್ದು, ನವೆಂಬರ್ 1ರಿಂದ ರೂಢಿಗತ ವರ್ಗಾವಣೆಗಳನ್ನು ಹೊರತುಪಡಿಸಿದರೆ ಬೇರೆ ಯಾವುದೇ ವರ್ಗಾವಣೆಗೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ವರ್ಗಾವಣೆ ಶಿಫಾರಸು ಪತ್ರಗಳೊಂದಿಗೆ ತಮ್ಮನ್ನು ಸಂಪರ್ಕಿಸುವುದನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿಲ್ಲಿಸಬೇಕು ಎಂದು ಒತ್ತಿ ಹೇಳಿದರು. ವರ್ಗಾವಣೆಗಾಗಿ ಶಿಫಾರಸು ಅಥವಾ ಒತ್ತಡ ಹೇರುವುದನ್ನು ಸಹಿಸುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಒತ್ತಿ ಹೇಳಿದ್ದಾರೆ.

ಬದಲಿಗೆ ಸರ್ಕಾರದ ಕೆಲಸ ಹಾಗೂ ಜನಸೇವೆಗೆ ಆದ್ಯತೆ ನೀಡಬೇಕು ಎಂದು ಡಿಕೆ ಶಿವಕುಮಾರ್ ಖಡಕ್ ಸಂದೇಶ ನೀಡಿದ್ದಾರೆ. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಮತ್ತು ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ತಲುಪುವಂತೆ ನೋಡಿಕೊಳ್ಳುವುದು ಆಡಳಿತದ ಪ್ರಮುಖ ಆದ್ಯತೆಯಾಗಬೇಕು ಎಂದು ಇದೇ ವೇಳೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಮುಖ್ಯಮಂತ್ರಿಗಳು ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಆದೇಶ ನೀಡಿದರು. ಒಂದು ವೇಳೆ ಜನಸೇವೆಯಲ್ಲಿ ಯಾವುದೇ ಅಧಿಕಾರಿ ನಿರ್ಲಕ್ಷ್ಯ ತೋರಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಸಿದ್ದಾರೆ.