SCO ಸದಸ್ಯ ರಾಷ್ಟ್ರಗಳಾದ ರಷ್ಯಾ, ಭಾರತ, ಇರಾನ್, ಕಜಕಿಸ್ತಾನ, ಕಿರ್ಗಿಸ್ತಾನ, ಪಾಕಿಸ್ತಾನ, ತಜಿಕಿಸ್ತಾನ, ಉಜ್ಬೇಕಿಸ್ತಾನ, ಬೆಲಾರಸ್ ಮತ್ತು ಚೀನಾ ಸಭೆಯಲ್ಲಿ ಭಾಗವಹಿಸುತ್ತಿವೆ. ಇನ್ನು ಈ ಸಭೆಯ ಅಧಕ್ಷತೆ ವಹಿಸಿರೋದು ಪಾಕಿಸ್ತಾನದ ರಾಷ್ಟ್ರೀಯ ಸಂಯೋಜಕ ಮೊಹಮ್ಮದ್ ಫೈಸಲ್. ಈ ಸಭೆಯ ಉದ್ದೇಶವಾದ್ರೂ ಏನು ಎನ್ನುವುದಾದರೆ SCO ಸದಸ್ಯ ರಾಷ್ಟ್ರಗಳ ನಡುವಿನ ಸಹಕಾರ ಮತ್ತು ಸಮನ್ವಯವನ್ನು ಮತ್ತಷ್ಟು ಬಲಪಡಿಸುವುದಾಗಿದೆ. ಇನ್ನು ಕಳೆದ ವರ್ಷದ ಭಾರತ-ಪಾಕಿಸ್ತಾನ ನಡುವೆ ನಡೆದ ಸಂಘರ್ಷದ ಬಳಿಕ ಭಾರತೀಯ ನಿಯೋಗ ಇಸ್ಲಾಮಾಬಾದ್ಗೆ ಭೇಟಿ ನೀಡುತ್ತಿರುವುದು ಇದೇ ಮೊದಲಾಗಿದೆ.
ಪಾಕಿಸ್ತಾನದ ಅಧ್ಯಕ್ಷತೆಯ ಅವಧಿಯ ಕಾರ್ಯಕ್ರಮಗಳು, ಮುಂಬರುವ SCO ಸಭೆಗಳು ಮತ್ತು ಕಾರ್ಯಕ್ರಮಗಳ ಸಿದ್ಧತೆ ಹಾಗೂ ಸಂಘಟನೆಯ ಕಾರ್ಯಸೂಚಿಗೆ ಸಂಬಂಧಿಸಿದ ಇತರ ವಿಚಾರಗಳು ಸಭೆಯಲ್ಲಿ ಚರ್ಚೆಯಾಗಲಿವೆ ಎಂದು ತಿಳಿದು ಬಂದಿದೆ

