ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪುದುಚೇರಿಯ ತಟ್ಟಂಚಾವಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ಆಲ್ ಇಂಡಿಯಾ ಎನ್ ಆರ್ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಆನಂದ್ ಭರ್ಜರಿ ಜಯ ಸಾಧಿಸಿದ್ದಾರೆ. ಈ ಗೆಲುವಿನ ಮೂಲಕ ಎನ್ಡಿಎ ಮೈತ್ರಿಕೂಟದ ಪ್ರಮುಖ ಪಾಲುದಾರ ಪಕ್ಷವಾಗಿರುವ 
 ತನ್ನ ಪ್ರಾಬಲ್ಯದ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. 

ಚುನಾವಣಾ ಕಣದಲ್ಲಿ ತೀವ್ರ ಪೈಪೋಟಿ ನಡೆಸಿದ ಅಶೋಕ್ ಆನಂದ್ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಇ. ವಿನಾಯಗಂ ಅವರನ್ನು 8,482 ಮತಗಳ ಅಂತರದಿಂದ ಮಣಿಸಿದ್ದಾರೆ. ಪುದುಚೇರಿಯ ತಟ್ಟಂಚಾವಡಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಎನ್.ರಂಗಸಾಮಿ ತಮ್ಮ ಶಾಸಕ ಸ್ಥಾನಕ್ಕೆ ನೀಡಿದ ರಾಜೀನಾಮೆ ನೀಡಿದ್ದರಿಂದ ಈ ಚುನಾವಣೆ ನಡೆದಿತ್ತು. 

ಪುದುಚೇರಿ ವಿಧಾನಸಭೆ ಚುನಾವಣೆಯಲ್ಲಿ ಆಲ್ ಇಂಡಿಯಾ ಎನ್.ಆರ್. ಕಾಂಗ್ರೆಸ್ ಮುಖ್ಯಸ್ಥ ಎನ್. ರಂಗಸಾಮಿ ತಟ್ಟಂಚಾವಡಿ’ ಮತ್ತು ಮಂಗಲಂ ಎಂಬ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿ, ಎರಡರಲ್ಲೂ ಜಯಗಳಿಸಿದ್ದರು. ರಂಗಸಾಮಿ ಮಂಗಲಂ ಕ್ಷೇತ್ರವನ್ನು ಉಳಿಸಿಕೊಂಡು, ತಟ್ಟಂಚಾವಡಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಟ್ಟಂಚಾವಡಿ ಉಪಚುನಾವಣೆ ನಡೆದಿತ್ತು. ಇಲ್ಲಿ ಶೇಕಡ 80.81ರಷ್ಟು ದಾಖಲೆಯ ಮತದಾನ ಆಗಿತ್ತು.