ದೇಶದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತಗಳ್ಳತನದ ಬಗ್ಗೆ ರಾಜ್ಯದ ಜನರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸಲು ಕೆಪಿಸಿಸಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಮತ ಉಳಿಸಿ, ದೇಶ ಉಳಿಸಿ ಎನ್ನುವ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನ 20ರವರೆಗೆ ನಡೆಯಲಿದ್ದು ಬ್ಲಾಕ್ ಮಟ್ಟದಲ್ಲಿ ಪಾದಯಾತ್ರೆಗಳನ್ನು ನಡೆಸಲು ಪಕ್ಷ ನಿರ್ಧರಿಸಿದೆ.

ನಿನ್ನೆ)ಗುರುವಾರ) ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಈ ವಿಷಯ ತಿಳಿಸಿದ್ದಾರೆ. ಪಕ್ಷದ ವತಿಯಿಂದ ರಾಜ್ಯದ ಪ್ರತಿ ಬ್ಲಾಕ್ನಲ್ಲಿ 5ಕಿ.ಮೀ.ಗಿಂತ ಹೆಚ್ಚು ದೂರದಲ್ಲಿ ಪಾದಯಾತ್ರಾಗಳು ನಡೆಯಲಿದೆ. ಗಾಂಧಿ ಅಥವಾ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ ಪ್ರಾರಂಭವಾಗಿ ಆಯಾ ಜಿಲ್ಲಾಧಿಕಾರಿ ಕಚೇರಿಯ ಬಳಿ ಕೊನೆಗೊಳ್ಳಲಿದೆ ಎಂದು ತಿಳಿಸಿದರು.

ಬ್ಲಾಕ್ ಮಟ್ಟದ ಹಿರಿಯ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಬಳಿಕ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ, ರಾಷ್ಟ್ರಗೀತೆ ಹಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಲಿದ್ದಾರೆ ಎಂದು ಹೇಳಿದರು. ದಸರಾ ಸಂದರ್ಭದಲ್ಲಿ ಮತಗಳ್ಳತನದ ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನಾವು ಮುಂದಾಗಿದ್ದೇವೆ ಎಂದು ಹರಿಪ್ರಸಾದ್ ತಿಳಿಸಿದರು. 

ಈ ಹೋರಾಟ ಇಷ್ಟಕ್ಕೇ ನಿಲ್ಲುವುದಿಲ್ಲ ಎಂದು ಸ್ಪಷ್ಟ ಪಡಿಸಿದ ಹರಿಪ್ರಸಾದ್ ಅಕ್ಟೋಬರ್ 25ರಿಂದ ನವೆಂಬರ್ 25ರವರೆಗೆ ಒಂದು ತಿಂಗಳ ಕಾಲ ಮತ್ತೊಂದು ರೀತಿಯ ಹೋರಾಟ ನಡೆಸಲಿದ್ದೇವೆ ಎಂದರು ಅದರಲ್ಲಿ ಸಾರ್ವಜನಿಕ ಸಭೆಗಳು, ಪತ್ರಿಕಾಗೋಷ್ಠಿಗಳು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಪಕ್ಷ ಆಯೋಜಿಸಲಿದೆ. ಈ ಕಾರ್ಯಕ್ರಮಗಳಲ್ಲಿ ರಾಜ್ಯ ನಾಯಕರು ತಮ್ಮ ತಮ್ಮ ಜಿಲ್ಲೆಗಳಲ್ಲಿ ನಡೆಯುವ ಪ್ರತಿಭಟನೆಗಳಲ್ಲಿ ಭಾಗವಹಿಸಲಿದ್ದಾರೆ. ಮತದಾರರ ಪಟ್ಟಿಯಲ್ಲಿನ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಬ್ಲಾಕ್ ಅಧ್ಯಕ್ಷರು ಹಾಗೂ ಬೂತ್ ಮಟ್ಟದ ಬಿಎಲ್ಎ-2 ಗಳಿಗೆ ತರಬೇತಿ ನೀಡಲಾಗುವುದು ದು ಹರಿಪ್ರಸಾದ್ ಹೇಳಿದರು

ಇನ್ನು ಈ ಹೋರಾಟವನ್ನು ಮತ್ತಷ್ಟು ಪರಿಣಾಕಾರಿಯಾಗಿ ಹಮ್ಮಿಕೊಂಡಿರುವುದಾಗಿ ಹೇಳಿದ ಹರಿಪ್ರಸಾದ್ ಅಇದರ ಅಂಗವಾಗಿ ಮತದಾರರ ಪಟ್ಟಿಯಿಂದ ಫಾರ್ಮ್-7 ಮತ್ತು ಇತರ ಅರ್ಜಿಗಳ ಮೂಲಕ ಹೆಸರುಗಳನ್ನು ಅಳಿಸಲಾಗಿರುವ ಮತದಾರರನ್ನು ಗುರುತಿಸುವ ಕೆಲಸವನ್ನೂ ಮಾಡಲಾಗುವುದು ಎಂದರು. ಅವರೊಂದಿಗೆ ಸಭೆಗಳನ್ನು ನಡೆಸಲಾಗುವುದು. ಎಎಸ್ ಡಿಡಿಒ ಪ್ರಕ್ರಿಯೆಯ ಮೂಲಕ ಹೆಸರುಗಳನ್ನು ತೆಗೆದುಹಾಕಿರುವ ಪ್ರಕರಣಗಳನ್ನು ಪಂಚಾಯಿತಿ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಪರಿಶೀಲಿಸಲಾಗುವುದು ಎಂದು ಹರಿಪ್ರಸಾದ್ ತಿಳಿಸಿದರು. ಇದರ ಜೊತೆ ರಾಜ್ಯದ ಹಲವು ಭಾಗಗಳಲ್ಲಿ ಮತದಾರರ ಪಟ್ಟಿಯನ್ನು ತಿರುಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದರು. ಇವೆಲ್ಲವನ್ನೂ ರಾಜ್ಯದ ಜನರ ಮುಂದಿಟ್ಟು ಅವರನ್ನು ಎಚ್ಚರಿಸಲಾಗುವುದು ಎಂದು ಅವರು ಹೇಳಿದರು