ನವೆಂಬರ್ 20ರಿಂದ 22ರವರೆಗೆ ದೆಹಲಿಯಲ್ಲಿ SCO ಸಾಂಸ್ಕೃತಿಕ ಸಂವಾದ ನಡೆಯಲಿದೆ. ಇದಕ್ಕೆ ಭಾರತ ಪಾಕಿಸ್ತಾನಕ್ಕೆ ಆಹ್ವಾನ ಕೊಟ್ಟಿದೆ.SCO ಸದಸ್ಯ ರಾಷ್ಟ್ರಗಳ ನಡುವೆ ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುವುದು ಇದರ ಹಿಂದಿರುವ ಮುಖ್ಯ ಉದ್ದೇಶವಾಗಿದೆ.ಭಾರತ ಪಾಕಿಸ್ತಾನಕ್ಕೆ ನೀಡಿರುವ ಈ ಆಹ್ವಾನ ದ್ವಿಪಕ್ಷೀಯ ಸಂಬಂಧಗಳನ್ನು ಈಗಲೇ ಸುಧಾರಿಸದೇ ಇದ್ದರೂ, ಬಹುಪಕ್ಷೀಯ ವೇದಿಕೆಯಲ್ಲಿನ ಸಹಕಾರದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಇಲ್ಲಿ ಭಾರತವೇನೋ ಪಾಕಿಸ್ತಾನಕ್ಕೆ ಆಹ್ವಾನ ನೀಡಿದೆ.ಆದರೆ ಅಲ್ಲಿನ ಪ್ರತಿನಿಧಿಗಗಳು ಇದರಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬದುದು ಇನ್ನೂ ಖಚಿತವಾಗಿ ಗೊತ್ತಾಗಿಲ್ಲ.
ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯವು ವಿದೇಶಾಂಗ ಸಚಿವಾಲಯದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಲಿದೆ. SCO ಏಷ್ಯಾದ ಹಲವು ದೇಶಗಳು ಸದಸ್ಯರಾಗಿರುವ ಪ್ರಾದೇಶಿಕ ಸಂಘಟನೆಯಾಗಿದೆ. ಈ ಸಂಘಟನೆಯ ಮೂಲಕ ಸದಸ್ಯ ರಾಷ್ಟ್ರಗಳು ಭದ್ರತೆ, ಆರ್ಥಿಕ ಸಹಕಾರ ಮತ್ತು ಸಾಂಸ್ಕೃತಿಕ ಸಂಬಂಧಗಳ ಕುರಿತು ಚರ್ಚೆ ಮಾಡುತ್ತವೆ. ಅದರಂತೆ ನವೆಂಬರ್ 20ರಿಂದ 22ರವರೆಗೆ ದೆಹಲಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿವಿಧ ದೇಶಗಳ ನಡುವಿನ ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುವುದು. ಕಲೆ, ಸಾಹಿತ್ಯ, ಸಂಪ್ರದಾಯಗಳು ಮತ್ತು ಐತಿಹಾಸಿಕ ಸಂಪರ್ಕಗಳ ಮೂಲಕ ಜನರ ನಡುವಿನ ಬಾಂಧವ್ಯವನ್ನು ಹೆಚ್ಚಿಸಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಗಳಲ್ಲಿ ಉದ್ವಿಗ್ನತೆಯಿಂದ ಕೂಡಿರುವಗಾಲೇ ಭಾರತ ಪಾಕಿಸ್ತಾನಕ್ಕೆ ಸೌಹಾರ್ದಯುತವಾದ ಆಹ್ವಾನ ಕೊಟ್ಟಿದೆ.
ಭಾರತ ನೀಡಿರುವ ಈ ಆಹ್ವಾನವನ್ನು ಪರಿಗಣಿಸಿ ಪಾಕಿಸ್ತಾನ, ಚೀನಾ, ರಷ್ಯಾ, ಇರಾನ್, ಕಜಕಿಸ್ತಾನ, ಕಿರ್ಗಿಸ್ತಾನ್, ತಜಿಕಿಸ್ತಾನ, ಉಜ್ಬೇಕಿಸ್ತಾನ ಮತ್ತು ಬೆಲಾರಸ್ ಸೇರಿದಂತೆ ಎಲ್ಲಾ 10 ಸದಸ್ಯ ರಾಷ್ಟ್ರಗಳಿಗೆ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ.

