ರಾಜ್ಯ ಮೇಲ್ಮನೆಯ ನಾಲ್ವರು ಸದಸ್ಯರ ಅಧಿಕಾರವಧಿ ನವೆಂಬರ್ 11ಕ್ಕೆ ಪೂರ್ಣಗೊಳ್ಳಲಿದೆ. ಕರ್ನಾಟಕ ಆಗ್ವೇಯ ಪದವೀಧರರ ಕ್ಷೇತ್ರದ ಚಿದಾನಂದ್ ಎಂ. ಗೌಡ, ಪಶ್ಚಿಮ ಪದವೀಧರರ ಕ್ಷೇತ್ರದ ಶಾಸಕ ಎಸ್.ವಿ. ಸಂಕನೂರ್, ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಶಾಸಕ ಶಶೀಲ್ ಜಿ. ನಮೋಶಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಶಾಸಕ ಪುಟ್ಟಣ್ಣ ಅವರ ಅಧಿಕಾರಾವಧಿ ಮುಗಿಯಲಿದೆ. ಈ ನಾಲ್ವರ ಸ್ಥಾನಗಳನ್ನು ಭರ್ತಿ ಮಾಡಲು ಕೇಂದ್ರ ಚುನಾವಣಾ ಆಯೋಗವು ಮತದಾನ ದಿನಾಂಕ ಘೋಷಣೆಮಾಡಿದೆ.
ಸೆಪ್ಟೆಂಬರ್ 29 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ಅಕ್ಟೋಬರ್ 6 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಎಲ್ಲ ಕ್ಷೇತ್ರಗಳಿಗೆ 2026ರ ಅಕ್ಟೋಬರ್ 23 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 27 ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬರಲಿದೆ.
ಇದರ ನಡುವೆ ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ತಮ್ಮ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿವೆ. ಬಿಜೆಪಿ 3 ಕ್ಷೇತ್ರಗಳಲ್ಲ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು ಒಂದು ಸ್ಥಾನವನ್ನು ಜೆಡಿಎಎಸ್ ಬಿಟ್ಟುಕೊಟ್ಟು ಮೈತ್ರಿ ಧರ್ಮ ಪಾಲಿಸಲಿದೆ ಎನ್ನುವ ಮಾತುಗಳು ಇವೆ.ಅದರಂತೆ ಪ್ರಕಾರ, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ಜಿ. ನಮೋಶಿ ಹಾಗೂ ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಕೆ.ಎಂ. ಸುರೇಶ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಿದೆ. ಅದೇ ರೀತಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿ ಇದವರೆಗೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಇದರಿಂದ ಈ ಕ್ಷೇತ್ರವನ್ನು ಜೆಡಿಎಸ್ ಜೊತೆಗಿನ ಮೈತ್ರಿಯ ಕಾರಣದಿಂದ ಬಿಟ್ಟುಕೊಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ, ಕಾಂಗ್ರೆಸ್ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರ್ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಹೆಸರುಗಳು ಘೋಷಣೆ ಮಾಡಿದೆ.
ಇದೇ ವೇಳೆ ರಾಜ್ಯದ ಜೊತೆಗೆ ಇತರೆ ರಾಜ್ಯಗಳದಾ ಬಿಹಾರ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗಳ ವೇಳಾಪಟ್ಟಿಗಳು ಅಧಿಕೃತವಾಗಿ ಪ್ರಕಟವಾಗಿದೆ.

