ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಸ್ಟ್ರಿಂಗ್ ಆಪರೇಷನ್ ಸುದ್ದಿ ಮಾತಾಡಿದ್ದೇ ಇದೀಗ ಅದು ಬೇರೆ-ಬೇರೆ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ಹಲವು ನಾಯಕರು ಅದರ ಬಗ್ಗೆ ಮಾತಾಡುತ್ತಿದ್ದಾರೆ. ಇದೀಗ ವಿರೋಧ ಪಕ್ಷದ ನಾಯಕ ಅಶೋಕ್ ಕೂಡಾ ಇದರ ಬಗ್ಗೆ ಪ್ರಸ್ತಾಪ ಮಾಡಿದ್ದು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿವೆ ಎನ್ನಲಾದ ಮೂರು ವಿಡಿಯೋಗಳು ತಮ್ಮ ಬಳಿಯೂ ಇವೆ ಎಂದು ಬಾಂಬ್ ಸಿಡಿಸಿದ್ದಾರೆ. ಈ ವಿಷಯವನ್ನು ಲಘುವಾಗಿ ಪರಿಗಣಿಸಬಾರದು. ಆರೋಪಿತ ವಿಡಿಯೋಗಳು ಈ ವಿವಾದದ ಕುರಿತು ಹೆಚ್ಚಿನ ಮಾಹಿತಿ ನೀಡಬಲ್ಲವು ಎಂದು ಅವರು ಹೇಳಿದರು

ವಿಡಿಯೋಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರ ಗಮನ ಸೆಳೆದ ಆರ್. ಅಶೋಕ್ ಸಂವಿಧಾನದ ಅಡಿಯಲ್ಲಿ ನೀವು ಪ್ರಮಾಣವಚನ ಸ್ವೀಕರಿಸಿದ್ದೀರಿ. ನಿಮ್ಮ ಗಮನಕ್ಕೆ ಬಂದ ಮೇಲೆ ಯಾಕೆ ಕ್ರಮ ತೆಗೆದುಕೊಂಡಿಲ್ಲ? ಎಂದು ಪ್ರಶ್ನೆ ಮಾಡಿದರು. ದಾಖಲೆ ಸಿಕ್ಕಿದ್ದರೂ ಅದನ್ನು ಮುಚ್ಚಿಡುವುದು ಗಂಭೀರ ಅಪರಾಧ. ನನಗೂ ಕೆಲ ವಿಡಿಯೋಗಳನ್ನು ಕಳುಹಿಸಿದ್ದಾರೆ. ವಿಡಿಯೋಗಳು ಈಗ ಎಲ್ಲರ ಬಳಿಯಲ್ಲೂ ಓಡಾಡುತ್ತಿವೆ. ಇದರ ಬಗ್ಗೆ ಸಿಎಂ ಯಾಕೆ ಇನ್ನೂ ಯಾವುದೇ ಕ್ರಮ ಕೈಗೊಳ್ಳದೇ ಮೌನವಾಗಿದ್ದೀರಿ ಎಂಬುದು ಅರ್ಧವಾಗಿಲ್ಲ ಎಂದು ಅಶೋಕ್ ಕೇಳಿದರು 

ಸಂಪುಟ ಸಭೆಯಲ್ಲಿ ಸಚಿವರನ್ನು ಟ್ರ್ಯಾಪ್ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿಗಳೇ ಇಂದು ಅಸಹಾಯಕ ಸ್ಥಿತಿಯಲ್ಲಿದ್ದಾರೆ. ತಮ್ಮದೇ ಸಚಿವರ ಮೇಲೆ ಅಥವಾ ಸ್ವತಃ ತಮ್ಮ ಮೇಲೆಯೇ ಟ್ರ್ಯಾಪ್ ನಡೆಯುತ್ತಿದೆ ಎಂದು ಹೇಳುತ್ತಿರುವುದು ಆತಂಕಕಾರಿ ವಿಚಾರ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದರು. ಮುಂದುವರಿದು, ಸರ್ಕಾರದ ಭದ್ರತಾ ಲೋಪವನ್ನು ತರಾಟೆಗೆ ತೆಗೆದುಕೊಂಡ ಅವರು ಯಾರು ಬೇಕಾದರೂ ಯಾರನ್ನು ಬೇಕಾದರೂ ಹನಿಟ್ರ್ಯಾಪ್ ಮಾಡಬಹುದಾದಂತಹ ಅಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರದ ಭದ್ರತೆ ಹದಗೆಟ್ಟಿರುವುದಕ್ಕೆ ಈ ಬೆಳವಣಿಗೆಗಳೇ ಸಾಕ್ಷಿ ಎಂದು ಅಶೋಕ್ ಪ್ರತಿಪಾದಿಸಿದರು.


ನನ್ನ ಮೇಲೆ ಟ್ರ್ಯಾಪ್ ಮಾಡಲು ಯತ್ನಿಸಿರುವ ಕುರಿತು ಸೂಕ್ತ ದಾಖಲೆಗಳಿವೆ ಎಂದು ಶಿವಕುಮಾರ್ ಹೇಳುತ್ತಿದ್ದಾರೆ ಹಾಗಾದರೆ ಅವರು ಏಕೆ ಈವರೆಗೆ ಅಧಿಕೃತವಾಗಿ ದೂರು ನೀಡಿಲ್ಲ ಎಂದು ಪ್ರಶ್ನೆ ಮಾಡಿದರು. ಈ ಗಂಭೀರ ಪ್ರಕರಣದ ಕುರಿತು ಇದುವರೆಗೆ ಏಕೆ ಎಫ್ಐಆರ್ ದಾಖಲಿಸಿಲ್ಲ. ಹೀಗೆ ಆಧಾರರಹಿತ ಆರೋಪಗಳನ್ನು ಮಾಡುತ್ತಾ ಗಾಳಿಯಲ್ಲಿ ಗುಂಡು ಹಾರಿಸುವುದಿದ್ದರೆ ಅದಕ್ಕೆ ಬೇರೆ ಜಾಗವನ್ನು ನೋಡಿಕೊಳ್ಳಿ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಅಧಿವೇಶನದಲ್ಲಿ ನಡೆದ ಚರ್ಚೆಯನ್ನು ಪ್ರಸ್ತಾಪಿಸಿದ ನಾಯಕರು, ಬೆಂಗಳೂರಿಗೆ ಹೊರಗಿನಿಂದ ಬಂದ ಸಚಿವರು ಮತ್ತು ಶಾಸಕರು ಎರಡೆರಡು ಮದುವೆಯಾಗಿದ್ದಾರೆ ಎಂದು ಮುಖ್ಯಮಂತ್ರಿಗಳು ಸದನದಲ್ಲಿ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಇದು ನಿಜವೇ ಆಗಿದ್ದರೆ, ಕಾನೂನು ಬಾಹಿರವಾಗಿ ನಡೆದುಕೊಂಡಿರುವ ಅಂತಹವರ ವಿರುದ್ಧ ಸರ್ಕಾರ ಇದುವರೆಗೆ ಏಕೆ ಎಫ್ ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಿಲ್ಲ? ಎಂದು ಅಶೋಕ್ ಸಿಎಂ ಶಿವಕುಮಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.